ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜುಗಳ ಸ್ಥಾಪನೆ: ಸಚಿವ ಡಾ. ಕೆ. ಸುಧಾಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ನೂತನ 9 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ 65 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸದಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿ ನಡೆಯುತ್ತಿದೆ ಎಂದರು.
ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇ. 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಪ್ರತಿ ವರ್ಷ 65 ಸಾವಿರ ಎಂಬಿಬಿಎಸ್ ವೈದ್ಯರು ಮತ್ತು 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಅವರು ಹೇಳಿದರು.
ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತವಾಗಿದ್ದು, ಸಮಾಜದಲ್ಲಿ ಬದಲಾವಣೆ ಆಗುತ್ತಿವೆ. ಬಡವರ ಮಕ್ಕಳು ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದರು.
ಕೊರೋನಾಸಂದರ್ಭದಲ್ಲಿ ಬೆಂಗಳೂರು ವೈದ್ಯಕೀಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾದ ಅರ್ಪಿಸಿದ ಸಚಿವರು, ಈ ಕಾಲೇಜಿನ ವೈದ್ಯರ ಶ್ರಮದಿಂದ ಲಸಿಕೆ ಬರುವವರೆಗೂ ಕೊರೋನಾ ನಿಯಂತ್ರಿಸಲು ಸಾಧ್ಯವಾಯಿತು. ವೈದ್ಯರ ಸೇವೆ ಸಮಾಜದಲ್ಲಿ ವಿವಿಧ ಗೌರವಗಳನ್ನು ಹೊಂದಿದೆ. ಮನುಷ್ಯತ್ವ ಮತ್ತು ಸೇವೆಯನ್ನು ಏಕಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದ್ದು, ಈ ವೃತ್ತಿಯಲ್ಲಿ ಆತ್ಮತೃಪ್ತಿಯೂ ಇದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!