ಹೊಸ ದಿಗಂತ ಡಿಜಿಟಲ್ ಡೆಸ್ಕ್
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ “ಮತ ಚೋರಿ”ಯ ಆರೋಪ ಮಾಡಿದ್ದಾರೆ. ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿಯವರ ‘ಬ್ರೆಜಿಲಿಯನ್ ಮಾಡೆಲ್ ಮತದಾನ ಮಾಡಿದ್ದಾರೆ’ ಎಂಬ ಆರೋಪಕ್ಕೆ ಬಿಜೆಪಿಯ ರಾಧಿಕಾ ಖೇರಾ ಪ್ರತಿಕ್ರಿಯಿಸಿ, “ಇಟಾಲಿಯನ್ ಮಹಿಳೆ” ಕೂಡ ನಮ್ಮ ದೇಶದಲ್ಲಿ ಮತ ಚಲಾವಣೆ ಮಾಡಿದ್ದರು. ಆ ಮಹಿಳೆಯ ಬಗ್ಗೆ ರಾಹುಲ್ ಗಾಂಧಿಯವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸುವ ಮೂಲಕ ಸೋನಿಯಾ ಗಾಂಧಿಯನ್ನು ಪರೋಕ್ಷವಾಗಿ ಉಲ್ಲೇಖಿಸಿ ಲೇವಡಿ ಮಾಡಿದ್ದಾರೆ.
‘ಹಿಂದೂಸ್ತಾನದಲ್ಲಿ ಇಟಾಲಿಯನ್ ಮಹಿಳೆಯೊಬ್ಬರು ಮತ ಚಲಾಯಿಸಿದ್ದರು. ನಿಮಗೆ ಅವರ ಹೆಸರು ತಿಳಿದಿದೆಯೇ? ಎಂದು ರಾಧಿಕಾ ಖೇರಾ ಎಕ್ಸ್ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

