Wednesday, November 5, 2025

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಗಿಲ್ ಹೆಗಲಿಗೆ ನಾಯಕನ ಜವಾಬ್ದಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಇದೀಗ ಆ ಟೆಸ್ಟ್ ಸರಣಿಗೆ ಬಿಸಿಸಿಐ (BCCI) 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.

ಈ ಸರಣಿಯು ನವೆಂಬರ್ 14 ರಂದು ಪ್ರಾರಂಭವಾಗಲಿದ್ದು, ಎಂದಿನಂತೆ ಶುಭ್​ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದಾಗಿ ಕಳೆದ ತವರು ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದ ರಿಷಭ್ ಪಂತ್ ತಂಡವನ್ನು ಕೂಡಿಕೊಂಡಿದ್ದು, ಉಪನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಕಳೆದ ಟೆಸ್ಟ್ ಸರಣಿಯ ಭಾಗವಾಗಿದ್ದ ಇಬ್ಬರು ಆಟಗಾರರನ್ನು ಈ ತಂಡದಲ್ಲಿ ಆಯ್ಕೆ ಮಾಡಲಾಗಿಲ್ಲ. ಈ ಇಬ್ಬರು ಆಟಗಾರರು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎನ್. ಜಗದೀಶನ್ ಮತ್ತು ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ. ಇಬ್ಬರಿಗೂ ವೆಸ್ಟ್ ಇಂಡೀಸ್ ವಿರುದ್ಧ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಗಲಿಲ್ಲ, ಇದೀಗ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ಮೊದಲ ಪಂದ್ಯ ನವೆಂಬರ್ 14 ರಿಂದ 18 ರವರೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ನಂತರ ಎರಡೂ ತಂಡಗಳು ಏಕದಿನ ಸರಣಿಯಲ್ಲಿ ಆಡಲಿವೆ.

ಟೆಸ್ಟ್ ಸರಣಿಗೆ ಭಾರತ ತಂಡ : ಶುಭ್​ಮನ್ ಗಿಲ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್, ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

error: Content is protected !!