ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ಯತಿ ನರಸಿಂಗಾನಂದ ಹಿಂದೂಗಳಿಗೆ ಕರೆನೀಡಿದ್ದಾರೆ.
ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮುಬಾರಕ್ಪುರದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ‘ಧರಮ್ ಸಂಸದ್ ನಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದೂಗಳು ಬಹುಸಂಖ್ಯಾತರಾಗಿರುವ ಕಾರಣ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಯೋಜಿತ ರೀತಿಯಲ್ಲಿ ಅನೇಕ ಮಕ್ಕಳಿಗೆ ಜನ್ಮ ನೀಡುವ ಮೂಲಕ ಮುಸ್ಲಿಮರು ದೇಶದಲ್ಲಿ ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮುಸ್ಲಿಮರು ಬಹುಸಂಖ್ಯಾತರಾದಾಗ ಭಾರತವನ್ನು ನೆರೆಯ ಪಾಕಿಸ್ತಾನದಂತೆ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಾರೆ. ಅದಕ್ಕಾಗಿ ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡುವಂತೆ ನಾವು ಹಿಂದೂಗಳನ್ನು ಕೇಳಿಕೊಳ್ಳುತ್ತಿದ್ದೇವೆ ಅವರು ಹೇಳಿದರು. ಅಖಿಲ ಭಾರತೀಯ ಸಂತ ಪರಿಷತ್ತಿನ ಹಿಮಾಚಲ ಪ್ರದೇಶ ಉಸ್ತುವಾರಿ ಯತಿ ಸತ್ಯದೇವಾನಂದ ಸರಸ್ವತಿ ಅವರು ಸಹ ಕಾರ್ಯಕ್ರಮದಲ್ಲಿ ಈ ಮಾತಿಗೆ ಧ್ವನಿಗೂಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ