ಹೊಸದಿಗಂತ ಡಿಜಿಟಲ್ ಡೆಸ್ಕ್
ದೆಹಲಿಯ ಡಿಎಲ್‌ಎಫ್ 3ನೇ ಹಂತದ ಪ್ರದೇಶದಲ್ಲಿ 24 ವರ್ಷದ ಮಹಿಳೆಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಡಿಎಲ್‌ಎಫ್ 3ನೇ ಹಂತದ ನಾಥುಪುರದಲ್ಲಿ ದುಷ್ಕರ್ಮಿಗಳು ರಾತ್ರಿ ಈ ಕೃತ್ಯ ನಡೆಸಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಟೋರಿಕ್ಷಾ ಚಾಲಕನಾಗಿರುವ ಸಂತ್ರಸ್ತೆಯ ಪತಿ ಹಂತದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತ್ನಿಯ ಕರೆ ಸ್ವೀಕರಿಸಿ ನಾನು ಅಘಾತಕ್ಕೀಡಾದೆ . ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿ ಚೂರಿಯಿಂದ ಇರಿದಿರುವುದಾಗಿ ಅವಳು ನನಗೆ ಹೇಳಿದಳು. ನಾನು ಅವಳನ್ನು ಸ್ಥಳದ ಬಗ್ಗೆ ಕೇಳಿದೆ ಆದರೆ ಅವಳಿಗೆ ಯಾವ ಸ್ಥಳವೆಂದು ಹೇಳಲು ಸಾಧ್ಯವಾಗಲಿಲ್ಲ. ನಂತರ ಅವಳು ನನ್ನನ್ನು ಮನೆಗೆ ಬರಲು ಹೇಳಿದಳು. ನಾನು ಮನೆಗೆ ತಲುಪಿದಾಗ ಆಕೆ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆಕೆಯ ಪತಿಯ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), 324 (ಘೋರವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಅನಿಲ್ ಠಾಕೂರ್ ಎಂಬಾತನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ