ದೇಶದಲ್ಲಿ 3,275 ಹೊಸ ಕೋವಿಡ್‌ ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಒಟ್ಟೂ 3,275 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು 55 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 19,719 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 0.77% ದಷ್ಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,23,430 ಕೋವಿಡ್‌ ಟೆಸ್ಟ್‌ ಮಾಡಲಾಗಿದೆ. ಒಟ್ಟೂ 3,010 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಲ್ಲಿಯವರೆಗೆ 4,25,47,699 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 189.63 ಕೋಟಿಗೂ ಅಧಿಕ ಲಸಿಕೆ ನೀಡಲಾಗಿದೆ.

ಹಾಗೂ 12 ರಿಂದ 14 ವರ್ಷದ 2.97 ಕೋಟಿ ಮಕ್ಕಳಿಗೆ ಪ್ರಥಮ ಡೋಸ್‌ ಲಾಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!