‘ಆಜಾದಿ ಮಾರ್ಚ್’​ ಪ್ರಕರಣ: ಶಾಸಕ ಜಿಗ್ನೇಶ್ ಮೇವಾನಿಗೆ ಮತ್ತೆ 3 ತಿಂಗಳ ಜೈಲು ಶಿಕ್ಷೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2017ರಲ್ಲಿ ಅನುಮತಿ ಇಲ್ಲದೇ ಆಜಾದಿ ಮೆರವಣಿಗೆ​ ನಡೆಸಿದ ಪ್ರಕರಣದಲ್ಲಿ ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಇತರ ಒಂಬತ್ತು ಮಂದಿ ದೋಷಿಗಳು ಎಂದು ಗುಜರಾತ್​ನ ಹೆಚ್ಚುವರಿ ಜ್ಯೂಡಿಸಿಯಲ್​ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ಮಹತ್ವದ ತೀರ್ಪು ಹೊರಡಿಸಿದೆ. ಶಾಸಕ ಜಿಗ್ನೇಶ್ ಮೇವಾನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ಜೆಎ ಪರ್ಮಾರ್ ಈ ಆದೇಶ ಹೊರಡಿಸಿದ್ದು, ಶಾಸಕ ಜಿಗ್ನೇಶ್ ಮೇವಾನಿ, ಎನ್‌ಸಿಪಿ ಕಾರ್ಯಾಧ್ಯಕ್ಷೆ ರೇಷ್ಮಾ ಪಟೇಲ್ ಮತ್ತು ಜಿಗ್ನೇಶ್ ಮೇವಾನಿ ಅವರ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್‌ನ ಕೆಲವು ಸದಸ್ಯರು ಸೇರಿದಂತೆ ಒಂಬತ್ತು ಮಂದಿಯನ್ನು ಆರೋಪಿಗಳು ಎಂದು ಘೋಷಣೆ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 143ರ ಅಡಿ ಈ ತೀರ್ಪು ನೀಡಲಾಗಿದೆ. ನ್ಯಾಯಾಲಯ ಎಲ್ಲ ಅಪರಾಧಿಗಳಿಗೆ ತಲಾ ಒಂದು ಸಾವಿರ ರೂಪಾಯಿ ದಂಡ ವಿಧಿಸಿದೆ.
ಜುಲೈ 2017 ರಲ್ಲಿ ಅನುಮತಿಯಿಲ್ಲದೆ ಮೆಹಸಾನಾದಿಂದ ಬನಸ್ಕಾಂತ ಜಿಲ್ಲೆಯ ಧನೇರಾಗೆ ‘ಆಜಾದಿ ಮಾರ್ಚ್​’ ಹೆಸರಿನಲ್ಲಿ ಮೆರವಣಿಗೆ ನಡೆಸಲಾಗಿತ್ತು. ಹೀಗಾಗಿ, ಪೊಲೀಸರು ಜಿಗ್ನೇಶ್ ಮೇವಾನಿ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 143 ರ ಅಡಿ ಎಫ್ಐಆರ್ ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ಹೊರಹಾಕಿದೆ.
ಕಳೆದ ಕೆಲ ದಿನಗಳ ಹಿಂದೆ ಅಷ್ಟೇ ಅಸ್ಸೋಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಜಿಗ್ನೇಶ್ ಮೇವಾನಿ, ತದನಂತರ ಜಾಮೀನಿನ ಮೇಲೆ ಹೊರಬಂದಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!