ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿನ ಮೇಲ್ಮೈ ಬಿಸಿಗಾಳಿಯ ಪರಿಣಾಮ ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ತಜ್ಞ ಪ್ರಸಾದ್, ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂಬುದಾಗಿ ಹೇಳಿದ್ದಾರೆ.
ಇನ್ನೂ ದಕ್ಷಿಣ ಒಳನಾಡಿ ಹಲವೆಡೆ ಮಳೆಯಾಗಲಿದೆ. ಕರಾವಳಿ ಭಾಗದಲ್ಲೂ ಮೂರು ದಿನ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದ್ದಾರೆ.