May 9, 2026
Saturday, May 9, 2026
spot_img

WEATHER | ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆಯಾಗುತ್ತಿದೆ.

 ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !