ಹೊಸದಿಗಂತ ವರದಿ ಮೈಸೂರು:
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ. ದೇವಗೌಡರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ. ಅವರ ಪುತ್ರ ಹರೀಶ್ ಗೌಡನಿಗೆ, ತಾವು ಸ್ಪರ್ಧಿಸುತ್ತಿರುವ ಚಾಮರಾಜ ಕ್ಷೇತ್ರದ ಟಿಕೆಟ್ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಿದರೆ, ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧನಿದ್ದೇನೆ.
ಜಿ.ಟಿ ದೇವೇಗೌಡರು ಪಕ್ಷಕ್ಕೆ ಬಂದು ಈ ಭಾಗದಲ್ಲಿ ಬಿಜೆಪಿಗೆ ಎಂಟರಿಂದ ಹತ್ತು ಸ್ಥಾನ ಗೆಲ್ಲಿಸುತ್ತಾರೆ ಅನ್ನೋದಾದ್ರೆ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ. ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ಇಂತಹ ಪಕ್ಷಕ್ಕಾಗಿ ಕ್ಷೇತ್ರ ತ್ಯಾಗಕ್ಕೂ ನಾನು ಸಿದ್ಧನಾಗುತ್ತೇನೆ. ಮೈಸೂರಿನ ಘಟಾನುಘಟಿ ನಾಯಕರು ಬಿಜೆಪಿಗೆ ಬರ್ತಾರೆ. ಈ ಬಗ್ಗೆ ಉಸ್ತುವಾರಿ ಸಚಿವರಿಗೆ ಮಾಹಿತಿಯಿದೆ ಎಂದರು.