January15, 2026
Thursday, January 15, 2026
spot_img

ಬರೀ ಮೊಬೈಲ್‌ ಗೇಮ್‌ನಲ್ಲಿ ಮುಳುಗಿರ್ಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೊಬೈಲ್ ಗೇಮ್ ಆಡಬೇಡ ಎಂದು ತಂದೆ ಬೈದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

 ನವೆಂಬರ್ 5ರಂದು ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಘಟನೆ ಡನೆದಿದ್ದು, ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಹೆಸರು ರಾಜವೀರ್‌ ಬಘೇಲ್‌.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಬಾಲಕ ಫ್ರೀ ಫೈರ್ ಎಂಬ ಮೊಬೈಲ್ ಗೇಮ್​ಗೆ ಅಡಿಕ್ಟ್ಆಗಿದ್ದ, ಇದರಿಂದಾಗಿ ತಂದೆ ಕೋಪಗೊಂಡು ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ಗದರಿದ್ದರು.

ಅಷ್ಟೇ ಅಲ್ಲದೆ ತಂದೆ ರಾಜವೀರ್ ಬಘೇಲ್ ಆಟ ಆಡುತ್ತಿದ್ದಾಗ ಅವನ ಫೋನ್ ಅನ್ನು ಕಸಿದುಕೊಂಡು ವಶಪಡಿಸಿಕೊಂಡಿದ್ದರು. ಕೋಪಗೊಂಡ ಹುಡುಗ ನೇರವಾಗಿ ತನ್ನ ಕೋಣೆಗೆ ಹೋದನು. ಅಷ್ಟರಲ್ಲಿ, ಕುಟುಂಬದ ಇತರ ಸದಸ್ಯರು ಊಟ ಮಾಡುತ್ತಿದ್ದರು. ಊಟದ ನಂತರ ಅವರು ಬಾಲಕನ ಕೋಣೆಗೆ ಹೋದಾಗ, ಅವರ ಮಗ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ಕೂಡಲೇ ಕುಣಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿದ್ದಾನೆಂದು ಘೋಷಿಸಿದ್ದಾರೆ.

Must Read

error: Content is protected !!