ಹೊಸದಿಗಂತ ಡಿಜಿಟಲ್ ಡೆಸ್ಕ್:
9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.
ಘಟನೆ ಬಳಿಕ ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. 25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು. ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.
ಬಳಿಕ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಒಂಬತ್ತನೇ ತರಗತಿ ಹುಡುಗಿ ಪ್ರೆಗ್ನೆಂಟ್! ಆರೋಪಿ ಅರೆಸ್ಟ್

