ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ.
ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್ ಸ್ವಾಮಿ(58ವ) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದೆ.
8 ತಿಂಗಳ ಹಿಂದೆ ಡಂಡ ನಾಯ್ಕ ಮೇಲೆ ಆನೆ ದಾಳಿ ನಡೆಸಿತ್ತು. ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ.
ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಸಾದ್ಯವಾಗದ ಪರಿಸ್ಥಿತಿ ಉಂಟಾಗಿದೆ.

