ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನ ಮೊರ್ಬಿಯಲ್ಲಿನ ಉಪ್ಪಿನ ಕಾಯಿ ಕಾರ್ಖಾನೆ ಗೋಡೆ ಕುಸಿದು 12 ಮಂದಿ ಸಾವನ್ನಪ್ಪಿ, 30ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರೋ ಘಟನೆ ನಡೆದಿದೆ. ಸಾವಿಗೀಡಾದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತರ ಕುಟುಂಬಗಳಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಅವರು ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತರ ಮುಂದಿನ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದು, ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗಾಗಿ ಪಟೇಲ್ ಮೊರ್ಬಿ ಜಿಲ್ಲಾಧಿಕಾರಿ ಮತ್ತು ಸಿಸ್ಟಮ್ ಆಪರೇಟರ್ಗಳಿಗೆ ಸೂಚನೆ ನೀಡಿದ್ದಾರೆ.
ಅವಶೇಷಗಳ ಅಡಿಯಲ್ಲಿ ಇನ್ನೂ ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಇನ್ನು ರಕ್ಷಣಾ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಮೋರ್ಬಿಯಲ್ಲಿ ಗೋಡೆ ಕುಸಿದು ಸಂಭವಿಸಿದ ದುರಂತ ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
The tragedy in Morbi caused by a wall collapse is heart-rending. In this hour of grief, my thoughts are with the bereaved families. May the injured recover soon. Local authorities are providing all possible assistance to the affected.
— Narendra Modi (@narendramodi) May 18, 2022