ದಿಗಂತ ವರದಿ ವಿಜಯಪುರ:
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗುಮ್ಮಟನಗರಿಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾನೆ.
ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಅಮಿತ್ ಮಾದರ ಅವರು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿ ಅಮಿತ್ ಮಾದರ ಮನೆಯ ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಸಾಧನೆ ಮಾಡಿದ ಅಮಿತಗೆ, ತಾಯಿ ಸಿಹಿ ತಿನ್ನಿಸಿ, ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ