Friday, November 7, 2025

ಕಬ್ಬು ಬೆಳೆಗಾರರ ಸಮಸ್ಯೆ: ಸಿಎಂ ನೇತೃತ್ವದ ಸಭೆಯಲ್ಲಿ ಶೀಘ್ರವೇ ಪರಿಹಾರದ ವಿಶ್ವಾಸವಿದೆ ಎಂದ ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ರೈತರ ಸಭೆ ಕರೆದಿದ್ದು, ಸಭೆಯಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಂತೆ ಚರ್ಚೆ ನಡೆಸಲಾಗಿದೆ. ಕಬ್ಬು ರೈತರದ್ದಾದರೂ , ಅದನ್ನ ಅರಿಯೋದು ಕಾರ್ಖಾನೆಯವರು. ಹೀಗಾಗಿ ದರ ನಿಗದಿಗೆ ಇಬ್ಬರು ಒಪ್ಪಬೇಕು ಎಂದು ಹೇಳಿದ್ದಾರೆ. ಈ ಕುರಿತಂತೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಲಿದ್ದಾರೆ ಎಂದು ತಿಳಿಸಿದರು.

error: Content is protected !!