ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ವ್ಯಕ್ತಿಯ ದೇಹದಲ್ಲಿದ್ದ ಬರೋಬ್ಬರಿ 206 ಮೂತ್ರಪಿಂಡದ ಕಲ್ಲುಗಳನ್ನು ವೈದ್ಯರು ಯಶಸ್ವಿಯಾಗಿ ತೆಗೆದು ಹಾಕಿದ್ದಾರೆ. ಹೈದರಾಬಾದ್ನಲ್ಲಿರುವ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯು ಈ ಘಟನೆಗೆ ಸಾಕ್ಷಿಯಾಗಿದೆ.
ತೆಲಂಗಾಣದ ನಲ್ಗೊಂಡ ನಿವಾಸಿ 56 ವರ್ಷದ ವೀರಮಲ್ಲ ರಾಮಲಕ್ಷ್ಮಯ್ಯ ಅವರು ಕಳೆದ ಆರು ತಿಂಗಳಿನಿಂದ ತೀವ್ರವಾದ ಸೊಂಟನೋವಿನಿಂದ ಬಳಲುತ್ತಿದ್ದರು. ಸ್ಥಳೀಯ ವೈದ್ಯರು ಸೂಚಿಸಿದ ಕೆಲವು ಔಷಧಿಗಳನ್ನು ಬಳಸುತ್ತಿದ್ದರೂ ಕೂಡ ನೋವು ಕಡಿಮೆಯಾಗಿರಲಿಲ್ಲ. ಕೊನೆಗೆ ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಪರಿಶೀಲಿಸಿದ ನಂತರ ಮೂತ್ರಪಿಂಡದಲ್ಲಿ ಕಲ್ಲುಗಳಿರುವುದು ಪತ್ತೆಯಾಗಿದೆ.
ತಕ್ಷಣವೇ ವೈದ್ಯರು ಕೀ ಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಬರೋಬ್ಬರಿ 206 ಕಿಡ್ನಿ ಸ್ಟೋನ್ ಗಳನ್ನು ಹೊರತೆಗೆದಿದ್ದಾರೆ. ಪ್ರಸ್ತುತ ರೋಗಿಯು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.