ಹೊಸ ದಿಗಂತ ಡಿಜಿಟಲ್ ಡೆಸ್ಕ್:
10ನೇ ತರಗತಿ ಪರೀಕ್ಷಾ ಫಲಿತಾಂಶ ಬಂದ ಬೆನ್ನಿಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ ಎಂದು ಅವರು ತಿಳಿಸಿದ್ದಾರೆ.
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ.
✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ.
✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.#PUCKarnataka
— B.C Nagesh (@BCNagesh_bjp) May 20, 2022