ನಿರ್ಮಾಣ ಹಂತದ ಕಟ್ಟಡ ಕುಸಿತ: ಐದು ಸಾವು, ಅವಶೇಷಗಳಡಿಯಲ್ಲಿ 80 ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇರಾನ್‌ನ ಕುಜೆಸ್ತಾನ್ ಪ್ರಾಂತ್ಯದ  ಅಬದಾನ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ 10 ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇದುವರೆಗೆ ಐವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು 80 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಅವಶೇಷಗಳಡಿ ಸಿಲುಕುವವರನ್ನು ಹೊರತರಲು ಸತತ ಪ್ರಯತ್ನ ನಡೆಯುತ್ತಿದೆ. ಇದುವರೆಗೆ 32 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮಾಹಿತಿ ಪಡೆದ ಕೂಡಲೇ ರಕ್ಷಣಾ ಶ್ವಾನಗಳು, ಹೆಲಿಕಾಪ್ಟರ್ ಮತ್ತು 7 ಜನರ ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಆಗಮಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಸತಿ ಪ್ರದೇಶ ಹಾಗೂ ವ್ಯಾಪಾರ ಕೇಂದ್ರಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕುಜೆಸ್ತಾನ್ ಪ್ರಾಂತೀಯ ಅಧಿಕಾರಿಗಳು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಕಟ್ಟಡದ ಗುತ್ತಿಗೆದಾರ ಮತ್ತು ಮಾಲೀಕರನ್ನು ಬಂಧಿಸಲಾಗಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮತ್ತೊಂದೆಡೆ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿರುವ ಬಗ್ಗೆ ಅಬದಾನ್ ನಿವಾಸಿಗಳು ನಗರಸಭೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!