ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾನದ ಸಮಯದಲ್ಲಿ ಇವಿಎಂಗಳ ಫೋಟೋಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಿಹಾರದಲ್ಲಿ ನಾಲ್ವರ ವಿರುದ್ಧ ಪ್ರಕರಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುರುವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯ ಮತದಾನ ನಡೆದ ಅರಾ, ಗೋಪಾಲ್‌ಗಂಜ್ ಮತ್ತು ಸರನ್‌ನಲ್ಲಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗೋಪಾಲ್‌ಗಂಜ್‌ನಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅರಾ ಮತ್ತು ಸರನ್‌ನಲ್ಲಿ ತಲಾ ಒಬ್ಬೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

