ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿಂದು ಲಖನೌ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿವೆ. ಆದರೆ, ಮಳೆಯ ಕಾರಣದಿಂದಾಗಿ ಟಾಸ್ನಲ್ಲಿ ವಿಳಂಬವಾಗಲಿದೆ.
ಇಂದಿನ ಪಂದ್ಯದಲ್ಲಿ ಗೆಲುವು ದಾಖಲು ಮಾಡುವ ತಂಡ ಕ್ವಾಲಿಫೈಯರ್ 1ರಲ್ಲಿ ಸೋತ ರಾಜಸ್ಥಾನ ವಿರುದ್ಧ ಹೋರಾಟ ನಡೆಸಲಿದೆ.
ವಿರಾಟ್ ಕೊಹ್ಲಿ, ಹಿಂದಿನ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಫಾರ್ಮ್ಗೆ ಮರಳಿದ್ದಾರೆ. ಇದರ ಜೊತೆಗೆ ನಾಯಕ ಡುಪ್ಲೆಸಿಸ್, ಮ್ಯಾಕ್ಸವೆಲ್, ಕಾರ್ತಿಕ್ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗಿದ್ದು, ಹಸರಂಗ, ಹರ್ಷಲ್ ಪಟೇಲ್, ಮ್ಯಾಕ್ಸಿ ಹಾಗೂ ಹ್ಯಾಜಲ್ವುಡ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.
ರಾಹುಲ್ ನಾಯಕತ್ವದಲ್ಲಿ ಲಖನೌ ಸೂಪರ್ ಜೈಂಟ್ಸ್ ಇದೇ ಮೊದಲ ಸಲ ಐಪಿಎಲ್ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದು, ಲೀಗ್ ಹಂತದಲ್ಲಿ ತಾನು ಆಡಿರುವ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ದಾಖಲು ಮಾಡಿ 3ನೇ ತಂಡವಾಗಿ ಪ್ಲೇ – ಆಫ್ ಪ್ರವೇಶ ಪಡೆದುಕೊಂಡಿದೆ.