ಜ್ಞಾನವಾಪಿ ವಿವಾದ: ಜುಲೈ 4ಕ್ಕೆ ಮಸೀದಿ ಸಮಿತಿ ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜ್ಞಾನವಾಪಿ ಮಸೀದಿ ವಿವಾದ ಕುರಿತು ಸಲ್ಲಿಸಲಾದ ತಕರಾರು ಅರ್ಜಿಗಳ ವಿಚಾರಣೆಯನ್ನು ವಾರಾಣಸಿ ತ್ವರಿತ ನ್ಯಾಯಾಲಯ ಜುಲೈ 4 ಕ್ಕೆ ಮುಂದೂಡಿದೆ.
ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಮಸೀದಿ ಸಮಿತಿ ಮತ್ತು ಮುಸ್ಲಿಂ ಮುಖಂಡರು ತಕರಾರು ಅರ್ಜಿ ಸಲ್ಲಿಸಿದ್ದು, ಇಂದು ಕೈಗೆತ್ತಿಕೊಂಡ ತ್ವರಿತ ನ್ಯಾಯಾಲಯ ವಿಚಾರಣೆಯನ್ನು ಜುಲೈ 4 ಕ್ಕೆ ಮುಂದೂಡಿತು.
ಜಿಲ್ಲಾ ನ್ಯಾಯಾಧೀಶ ಡಾ.ಅಜಯ್ ಕೃಷ್ಣ ವಿಶ್ವೇಶ ಅವರಿದ್ದ ಪೀಠ ಜುಲೈ 4 ರಂದು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!