ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ.
ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿತ್ತು.ಇದೀಗ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಮೂಲಕ ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!