ಹೊಸದಿಗಂತ ಡಿಜಿಟಲ್ ಡೆಸ್ಕ್
ಜೂ.10ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇದೀಗ ಶಾಸಕರ ಕುದುರೆ ವ್ಯಾಪಾರದ ಭೀತಿ ಎದುರಾಗಿದ್ದು, ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್ಗೆ ಕಳುಹಿಸಲು ಮುಂದಾಗಿದೆ.
ಹರಿಯಾಣದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಸ್ಪರ್ಧಿಸಿದ್ದಾರೆ. ಆದರೆ, ಪಕ್ಷವು ರಾಜ್ಯದ ಹೊರಗಿನವರನ್ನು ಕಣಕ್ಕಿಳಿಸಿರುವ ಕಾರಣ ಅತೃಪ್ತಿ ಉಂಟಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಶಾಸಕರ ಕುದುರೆ ವ್ಯಾಪಾರದ ಆತಂಕವೂ ಕಾಂಗ್ರೆಸ್ಗೆ ಕಾಡುತ್ತಿದೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯಾ ರಾಜ್ಯಗಳಿಗೆ ತನ್ನ ಉಸ್ತುವಾರಿಗಳನ್ನು ನೇಮಿಸಿದೆ. ಕರ್ನಾಟಕದ ಉಸ್ತುವಾರಿಯಾಗಿ ಕೇಂದ್ರ ಸಚಿವ ಕೆ.ಕಿಶನ್ ರೆಡ್ಡಿ ಅವರನ್ನು ನೇಮಿಸಲಾಗಿದೆ.ರಾಜಸ್ಥಾನ-ನರೇಂದ್ರ ಸಿಂಗ್ ತೋಮರ್, ಹರಿಯಾಣ-ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಮಹಾರಾಷ್ಟ್ರ ಉಸ್ತುವಾರಿಯಾಗಿ ಅಶ್ವಿನಿ ವೈಷ್ಣವ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ