ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಸಜ್ಜು: ರಿಲೀಸ್ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಮಾಡುತ್ತಾ ಜನಮನಗೆದ್ದ ಚಂದನವನದ ನವರಸ ನಾಯಕ ನಟ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ.
ಸದ್ಯ ಟೀಸರ್ ನಿಂದಲೇ ಭರವಸೆ ಹುಟ್ಟಿಸಿರೋ ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿನ ಜಗ್ಗೇಶ್ ಪಂಚಿಂಗ್ ಡೈಲಾಗ್ ಹಾಗು ಮ್ಯಾನರಿಸಂ ಅದ್ಭುತವಾಗಿ ಮೂಡಿಬಂದಿದೆ.
ಸಂತೋಷ್ ಆನಂದ್ ರಾಮ್ ಆ್ಯಕ್ಷನ್‌ ಕಟ್ ಹೇಳಿರುವ ಸಿನಿಮಾ ಜಗ್ಗೇಶ್ ಗೆ ಜೋಡಿಯಾಗಿ ಶ್ವೇತಾ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಹೊಂಬಾಳೆ ಫಿಲ್ಮ್ ಸಂಸ್ಥೆ ವರಮಹಾಲಕ್ಷ್ಮೀ ಹಬ್ಬಕ್ಕೆ ಅಂದ್ರೆ 5.8.2022ರಂದು ರಾಘವೇಂದ್ರ ಸ್ಟೋರ್ಸ್ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!