Monday, November 10, 2025

ಚನ್ನಗಿರಿಯಲ್ಲಿ ಭೀಕರ ದುರಂತ: ಭದ್ರಾ ಕಾಲುವೆಗೆ ಬಿದ್ದ ಕಾರು, ಇಬ್ಬರು ಜಲಸಮಾಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಹತ್ತಿರ ಹೊಸೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಚಾನಲ್‌ಗೆ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38) ಮತ್ತು ಮಲ್ಲಿಕಾರ್ಜುನ್ (27) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದು, ಅವರು ಮಂಗಳೂರು ಬಳಿಯ ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಅಪಘಾತಕ್ಕೆ ಕಾರಣ ಚಾಲಕನ ನಿದ್ರೆ ಮಂಪರು ಎನ್ನಲಾಗುತ್ತಿದ್ದು, ಕಾರು ಅತಿ ವೇಗದಲ್ಲಿ ಸಾಗುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಚಾನಲ್‌ಗೆ ಪಲ್ಟಿಯಾಗಿದೆ. ಈ ಭೀಕರ ಘಟನೆಯಿಂದ ಸ್ಥಳದಲ್ಲೇ ಇಬ್ಬರು ಪ್ರಾಣ ಕಳೆದುಕೊಂಡರೆ, ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಚಾನಲ್‌ನಲ್ಲಿ ಬಿದ್ದ ಕಾರು ಹಾಗೂ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ.

error: Content is protected !!