ಹೊಸದಿಗಂತ ಡಿಜಿಟಲ್ ಡೆಸ್ಕ್
ಟ್ಯೂಷನ್ ತರಗತಿ ನೆಪದಲ್ಲಿ 15 ವರ್ಷದ ಅಪ್ರಾಪ್ತೆಯನ್ನು ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಪತ್ನಿ ಇಜ್ಜತ್ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸುತ್ತಿದ್ದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಸಂತ್ರಸ್ತೆ ವಿದ್ಯಾರ್ಥಿನಿಯಾಗಿದ್ದಳು. ಇದನ್ನೇ ನೆಪವಾಗಿಸಿಕೊಂಡ 30 ವರ್ಷದ ಆರೋಪಿ ಜೂನ್ 2 ರಂದು, ತರಗತಿಯ ನೆಪದಲ್ಲಿ ಅಪ್ರಾಪ್ತೆಯನ್ನು ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಬಾಲಕಿಯ ಪೋಷಕರು ಆತನ ವಿರುದ್ಧ ಇಜ್ಜತ್ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ