ಹೊಸದಿಗಂತ ಡಿಜಿಟಲ್ ಡೆಸ್ಕ್
ಬಾಲಿವುಡ್ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ 50ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು,ಈ ವೇಳೆ ಬರ್ತ್ ಡೇ ಪಾರ್ಟಿಯಲ್ಲಿಪಾಲ್ಗೊಂಡ 50 ಮಂದಿಗೆ ಕರೊನಾ ಸೋಂಕು ತಗುಲಿದೆ ಎಂಬ ಬಗ್ಗೆ ವರದಿಯಾಗಿದೆ.
ಪಾರ್ಟಿಯಲ್ಲಿ ಸಲ್ಮಾನ್ ಖಾನ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಕರೀನಾ ಕಪೂರ್, ಐಶ್ವರ್ಯಾ ರೈ, ರಾಣಿ ಮುಖರ್ಜಿ, ಪ್ರೀತಿ ಜಿಂಟಾ, ಕಾಜಲ್ ಹೀಗೇ ಎಲ್ಲಾ ಬಾಲಿವುಡ್ ತಾರೆಯರು ಪಾಲ್ಗೊಂಡಿದ್ದರು.
ಆದರೀಗ ಈ ಹುಟ್ಟುಹಬ್ಬ ಆಚರಣೆ ವೇಳೆ ಕೊರೋನಾ ಸ್ಫೋಟಗೊಂಡಿದೆ ಎಂಬ ವಿಚಾರಗಳು ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾರಿಗೂ ಸೋಂಕು ತಗುಲಿಲ್ಲ, ಹುಟ್ಟುಹಬ್ಬ ಆಚರಣೆ ವೇಳೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಲಾಗಿದೆ.
ಕೊರೋನಾ ಹರಡಿದೆ ಎಂಬುದು ಶುದ್ಧ ಸುಳ್ಳು, ಇದೊಂದು ವದಂತಿ ಎಂದು ಕಾರ್ಯಕ್ರಮ ಆಯೊಜಕರು ಸ್ಪಷ್ಟಪಡಿಸಿದ್ದಾರೆ. ಆದರೆ ಕರಣ್ ಜೋಹರ್ ಹುಟ್ಟಹಬ್ಬ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ನಟ ಕಾರ್ತಿಕ್ ಆರ್ಯನ್ಗೆ ಸೋಂಕು ದೃಢವಾಗಿರುವುದು ಮಾತ್ರ ಅನುಮಾನಕ್ಕೆಡೆ ಮಾಡಿಕೊಟ್ಟಿದೆ.