ಅರುಣಾಚಲ ಪ್ರದೇಶದಲ್ಲಿ ಇಬ್ಬರು ಸೈನಿಕರು ನಾಪತ್ತೆ: ಹುಡುಕಿಕೊಡುವಂತೆ ಮೊರೆಯಿಟ್ಟ ಕುಟುಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಇಬ್ಬರು ಭಾರತೀಯ ಸೇನಾ ಯೋಧರು ಕಳೆದ 14 ದಿನಗಳಿಂದ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ಮೂಲದ ಇಬ್ಬರು ಯೋಧರಾದ 7 ನೇ ಗರ್ವಾಲ್ ರೈಫಲ್ಸ್ ಪಡೆಯ ಹರೇಂದ್ರ ನೇಗಿ ಮತ್ತು ಪ್ರಕಾಶ್ ಸಿಂಗ್ ರಾಣಾ ಮೇ 28 ರಿಂದ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಸೇನೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಇಂಡಿಯಾ ಟುಡೇ ಜೊತೆ ಮಾತನಾಡಿದ ಪ್ರಕಾಶ್ ಸಿಂಗ್ ರಾಣಾ ಅವರ ಪತ್ನಿ ಮಮತಾ ರಾಣಾ, ಮೇ 29 ರಂದು ಸೇನಾ ಅಧಿಕಾರಿಗಳು ತನಗೆ ಕರೆ ಮಾಡಿ ನಿಮ್ಮ ಪತಿ ಮೇ 28ರಂದು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಜೂನ್ 9 ರಂದು ಎರಡನೇ ಫೋನ್ ಕರೆ ಬಂದಿತು ಮತ್ತು ಇಬ್ಬರೂ ಸೈನಿಕರು ನದಿಯಲ್ಲಿ ಮುಳುಗಿದ್ದಾರೆ ಎಂದು ನಂಬಲಾಗಿದೆ ಎಂದು ಅವರು ನನಗೆ ಹೇಳಿದರು ಎಂದು ನೋವು ತೋಡಿಕೊಂಡಿದ್ದಾರೆ.
ಮಮತಾ ಮತ್ತು ಅವರ ಇಬ್ಬರು ಮಕ್ಕಳಾದ ಅನುಜ್ (10) ಮತ್ತು ಅನಾಮಿಕಾ (7) ಪ್ರಕಾಶ್ ಅವರ ಮಾತಿಗಾಗಿ 14 ದಿನಗಳಿಂದ ಕಾಯುತ್ತಿದ್ದಾರೆ.
ಹರೇಂದ್ರ ನೇಗಿ ಅವರ ಪತ್ನಿ ಪೂನಂ ನೇಗಿ ಪ್ರತಿಕ್ರಿಯಿಸಿ, ಇಬ್ಬರು ಸೈನಿಕರು ನದಿಯ ಬಳಿ ಹೋಗಿದ್ದು ಯಾರಿಗೂ ತಿಳಿದಿಲ್ಲ ಎಂಬ ವಿಚಾರವನ್ನು ನಂಬಲು ನನಗೆ ಕಷ್ಟವಾಗುತ್ತಿದೆ ಎಂದು ಹೇಳಿದರು.
ಹರೇಂದ್ರ ನೇಗಿ ಮತ್ತು ಅವರ ಪತ್ನಿ ಪೂನಂ ನೇಗಿ ಅವರಿಗೆ ಒಂದು ವರ್ಷದ ಮಗುವಿದ್ದು, ಮದುವೆಯಾಗಿ ಕೇವಲ ಮೂರು ವರ್ಷಗಳಾಗಿವೆ.
ಏತನ್ಮಧ್ಯೆ, ಪ್ರಕಾಶ್ ಸಿಂಗ್ ರಾಣಾ ಅವರ ಕುಟುಂಬವನ್ನು ಅವರ ಸೈನಿಕ ಕಾಲೋನಿ ನಿವಾಸದಲ್ಲಿ ಭೇಟಿಯಾದ ಸಹಸ್‌ಪುರದ ಬಿಜೆಪಿ ಶಾಸಕ ಸಹದೇವ್ ಸಿಂಗ್ ಪುಂಡೀರ್, ಈ ಬಗ್ಗೆ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರೊಂದಿಗೆ ಮಾತುಕತ೩ಎ ನಡೆಸಿದ್ದೇನೆ. ಈ ಬಗ್ಗೆ ಗಮನಹರಿಸಲಾಗುವುದು ಎಂದು ಅವರು ನನಗೆ ಭರವಸೆ ನೀಡಿದ್ದಾರೆ ಎಂದು ಪುಂಡೀರ್ ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಯೋಧರ ವಿವರಗಳನ್ನು ಕೇಂದ್ರ ಸಚಿವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!