ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆ ಸರ್ಕಾರದ ಜವಾಬ್ದಾರಿ: ಶಿವಶಂಕರ್

ಹೊಸದಿಗಂತ ವರದಿ ಮಡಿಕೇರಿ:

ಅಗತ್ಯ ಸೇವೆಗಳಡಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಶಿವಶಂಕರ್ ತಿಳಿಸಿದರು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಸಮಸ್ಯೆ ಇರುವ ಅಂಗನವಾಡಿ ಕಾರ್ಯಕರ್ತೆಯರ ವೈದ್ಯಕೀಯ ವೆಚ್ಚವನ್ನು ಸರಕಾರವೇ ಭರಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದರು. ಯಾವುದೇ ಸವಲತ್ತು ಇಲ್ಲದ, ಸಂಬಳ ಕಡಿಮೆ ಇದ್ದ ಸಂದರ್ಭದಲ್ಲಿಯೂ ನಿರಂತರವಾಗಿ ಸೇವೆ ನೀಡಿದ್ದಾರೆ. ದೇಶವ್ಯಾಪಿ ನಡೆದ ಹೋರಾಟದ ಫಲವಾಗಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳಿಗೆ ಮನ್ನಣೆ ದೊರೆತಿದ್ದು, ಪ್ರತಿ ರಾಜ್ಯದಲ್ಲಿ ‘ಗ್ರಾಜ್ಯೂಟಿ’ ಅಳವಡಿಕೆಗೆ ಸುಪ್ರೀಂ ಸೂಚಿಸಿದೆ. ಆದರೆ, ನಿರ್ದಿಷ್ಟವಾದ ತೀರ್ಮಾನವಾಗುವ ತನಕ ಯೋಜನೆ ಜಾರಿಯಾಗಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತರು ಹಲವಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆರೋಗ್ಯ ಸಮಸ್ಯೆಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು, ಉಚಿತ ವೈದ್ಯಕೀಯ ಸವಲತ್ತು ದೊರಕಬೇಕು, ಇಎಸ್‌ಐ ಹಾಗೂ ಪಿಎಫ್ ಜಾರಿಯಾಗಬೇಕು, ಸಂಧ್ಯಾ ಸುರಕ್ಷಾ ಯೋಜನೆಗೆ ನಿವೃತ್ತ ಕಾರ್ಯಕರ್ತೆಯನ್ನು ಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸಿದರು. ಸ್ವಂತ ಕಟ್ಟಡ ಇಲ್ಲದ ಅಂಗನವಾಡಿಯನ್ನು ಸ್ಥಳೀಯ ಸರಕಾರಿ ಶಾಲೆಯಲ್ಲಿ ಆರಂಭಿಸಲು ಸೂಚಿಸಲಾಗಿದೆ. ಆದರೆ ಇದುವರೆಗೂ ಈ ಬಗ್ಗೆ ಕ್ರಮಕೈಗೊಂಡಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!