ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು.
ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು- ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಜೈಲಿನಲ್ಲಿ ರಾಜಾತಿಥ್ಯ ಸಿಗ್ತಿರೋದು: ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ

