2,600 ಕೋಟಿ ಮೌಲ್ಯದ ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದ ಕೈಗಾರಿಕಾ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು ಉತ್ತೇಜಿಸುವು ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ.
ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ) ಸಭೆಯು ಈ ಯೋಜನೆಗಳಿಗೆ ಅನುಮೋದನೆ ದೊರಕಿದೆ.
ಒಟ್ಟಾರೆ 2,689.51  ಕೋಟಿ ರೂ. ಹೂಡಿಕೆಯ 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ. 6,825 ಜನರಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ದೊರೆತಿರುವ ಪ್ರಸ್ತಾವನೆಗಳು:

1.ಪರ್ಪಲ್‍ಸ್ಟಾರ್ ಹೈಜೀನ್ ಪ್ರೈವೇಟ್ ಲಿಮಿಟೆಡ್ – ಹೂಡಿಕೆ 270 ಕೋಟಿ ರೂ., ಉದ್ಯೋಗ – 400

2.ಬೆಳಗಾವಿ ಶುಗರ್ಸ್ ಪ್ರೈವೇಟ್ 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ

3.ಪರತ್ಪರ ಕಾಫಿ ಲಿಮಿಟೆಡ್ -236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ

4.ಲಾಜಿಕಲಿ ಇನ್ಫೋಮೀಡಿಯಾ ಪ್ರೈವೇಟ್ ಲಿಮಿಟೆಡ್- 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ

5.ಎಎನ್‍ಎಸ್ ಪೇಪರ್ ಪ್ರೈವೇಟ್ ಲಿಮಿಟೆಡ್ -100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ

6.ಗೋದಾವತ್ ಪುಡ್ ಪ್ರೋ ಪ್ರೈವೇಟ್ ಲಿಮಿಟೆಡ್ -98.60 ಕೋಟಿ ರೂ. ಹೂಡಿಕೆ, ಉದ್ಯೋಗ – 30

7.ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೇಟ್ ಲಿಮಿಟೆಡ್- 50 ಕೋಟಿ ರೂ. ಹೂಡಿಕೆ, ಜೊತೆಗೆ 220 ಉದ್ಯೋಗ

ಈ ಹಿಂದೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದ ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ 2022ರ ಏಪ್ರಿಲ್ 30ರಂದು ನಡೆದ 131ನೇ ಸಭೆಯಲ್ಲಿ 8,575 ಜನರಿಗೆ ಉದ್ಯೋಗಾವಕಾಶದೊಂದಿಗೆ ರೂ 2,465.94 ಕೋಟಿ ಮೌಲ್ಯದ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿತ್ತು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!