ಹೊಸದಿಗಂತ ವರದಿ, ಬಾಗಲಕೋಟೆ:
ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆದ 21879 ವಿದ್ಯಾರ್ಥಿಗಳ ಪೈಕಿ 15029 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ.68.69 ರಷ್ಟು ಫಲಿತಾಂಶ ಪಡೆದು ರಾಜ್ಯ ಮಟ್ಟದಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ.
ಕಳೆದ 2019 ಮತ್ತು 2020 ರಲ್ಲಿ ರಾಜ್ಯ ಮಟ್ಟದಲ್ಲಿ 7 ಸ್ಥಾನ ಪಡೆದುಕೊಂಡಿತ್ತು. 2022ನೇ ಸಾಲಿನಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಪ್ರಸಕ್ತ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿಗಳು 21879 ಪೈಕಿ 15029, ಪುನರಾವರ್ತಿತ ವಿದ್ಯಾರ್ಥಿಗಳು 1973 ಪೈಕಿ 547 ಹಾಗೂ ಖಾಸಗಿ 800 ವಿದ್ಯಾರ್ಥಿಗಳ ಪೈಕಿ 203 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.
ಕಲಾ ವಿಭಾಗದಲ್ಲಿ 10212 ವಿದ್ಯಾರ್ಥಿಗಳ ಪೈಕಿ 6043 ಜನ ತೇರ್ಗಡೆ ಹೊಂದುವ ಮೂಲಕ ಶೇ.59.18 ರಷ್ಟು ಫಲಿತಾಂಶವಾದರೆ, ವಾಣಿಜ್ಯ ವಿಭಾಗದಲ್ಲಿ 5130 ಪೈಕಿ 3869 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 6537 ವಿದ್ಯಾರ್ಥಿಗಳ ಪೈಕಿ 5117 ವಿದ್ಯಾರ್ಥಿಗಳು ತೇರ್ಗಡೆಹೊಂದಿ ಶೇ.78.28 ರಷ್ಟು ಫಲಿತಾಂಶ ಲಭಿಸಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ