Monday, November 10, 2025

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಮತ್ತೆ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವು ದಿನಗಳಿಂದ ಧರ್ಮೇಂದ್ರ ಅವರು ಅಸ್ವಸ್ಥರಾಗಿದ್ದರು. ಇಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರವಷ್ಟೇ ನಟ ಧರ್ಮೇಂದ್ರ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಲ್ಲದೇ ಏಪ್ರಿಲ್‌ನಲ್ಲಿ ಅವರು ಕಣ್ಣಿನ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು ಎಂದು ತಿಳಿದುಬಂದಿದೆ.

error: Content is protected !!