ಕಬ್ಬಿಣದ ಏಣಿಗೆ ವಿದ್ಯುತ್ ತಗುಲಿ ಕೃಷಿಕ ಸಾವು

ಹೊಸದಿಗಂತ ವರದಿ , ಕುಶಾಲನಗರ:

ಕಬ್ಬಿಣದ ಏಣಿಗೆ ವಿದ್ಯುತ್ ಪ್ರವಹಿಸಿ ಕೃಷಿಕರೊಬ್ಬರು ಸಾವನ್ನಪ್ಪಿದ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ.
ಗ್ರಾಮದ ಕೃಷಿಕ ನಡುಮನೆ ಭರತ್ (46) ಮೃತ ವ್ಯಕ್ತಿ.
ತಮ್ಮ ತೋಟದಲ್ಲಿ‌ ಮರ ಕಪಾತು ಮಾಡುವ ವೇಳೆ ಮೇಲೆ ಹಾದುಹೋಗಿದ್ದ 11 ಕೆವಿ ವಿದ್ಯುತ್ ಮಾರ್ಗಕ್ಕೆ ಏಣಿ ತಗುಲಿ ಈ ದುರ್ಘಟನೆ ಸಂಭವಿಸಿದೆ.
ಮೃತರು ಪತ್ನಿ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಹಾರಕ್ಕೆ ಒತ್ತಾಯ: ಮೃತ ಭರತ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಹಾಗೂ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!