ಯೋಗ ಜೀವನ ದಾರಿಯಾಗಬೇಕು – ಸಂಸದ ಡಾ. ಜಾಧವ

ಹೊಸದಿಗಂತ ವರದಿ ಕಲಬುರಗಿ:
ಯೋಗ ಕೇವಲ ಜೀವನದ ಭಾಗವಾಗದೆ, ಜೀವನದ ದಾರಿಯಾಗಬೇಕು. ಯೋಗದಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ. ಪ್ರತಿಯೊಬ್ಬರು ಯೋಗವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ ಅವರು ಅಭಿಮತಪಟ್ಟರು.

ಮಂಗಳವಾರ ಇಲ್ಲಿನ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್‌ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಶರಣಬಸವೇಶ್ವರ ಸಂಸ್ಥಾನ, ಶರಣಬಸವ ವಿಶ್ವವಿದ್ಯಾಲಯ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಎನ್‌.ಎಸ್.ಎಸ್‌ ಘಟಕ, ರಾಜ್ಯ ಎನ್.ಸಿ.ಸಿ ಘಟಕ, ವಿಕಾಸ ಅಕಾಡೆಮಿ ಕಲಬುರಗಿ, ಪತಂಜಲಿ ಯೋಗ ಸಂಸ್ಥೆ, ಭೂಮಿ ಯೋಗ ಪೌಂಡೇಶನ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಶ್ರೀ ಹಿಂಗುಲಾಂಬಿಕಾ ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಹೆಚ್.ಕೆ.ಇ ಹೋಮಿಯೋಪತಿ ಮೆಡಿಕಲ್ ಕಾಲೇಜ್, ಟಿಪ್ಪು ಸುಲ್ತಾನ್ ಮೆಡಿಕಲ್ ಕಾಲೇಜ್ ಹಾಗೂ ವಿವಿಧ ಸಂಘ ಸಂಸ್ಥೆಗಳು ಇಲಾಖೆಗಳ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎಂಟನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಾನಸಿಕ, ಸಾಮಾಜಿಕ ಹಾಗೂ ದೈಹಿಕ ಅಭಿವೃದ್ಧಿಯೇ ಆರೋಗ್ಯವಾಗಿದೆ. ಅದನ್ನೆಲ್ಲಾ ಪಡೆದುಕೊಳ್ಳಲು ಯೋಗ ಮುಖ್ಯ ಸಧಾನವಾಗಿದೆ. ಹಿಂದೆಲ್ಲ ಯೋಗ ಎಂದರೆ ನಿರ್ಲಕ್ಷ ತೋರುತ್ತಿದ್ದರು. ಆದರೆ, ಇಂದಿನ ದಿನಗಳಲ್ಲಿ ಯೋಗ ಇಡೀ ಜಗತ್ತಿನ ಇತರೆ ದೇಶಗಳಲ್ಲಿಯೂ ಸಹ ಯೋಗ ದಿನ ಆಚರಣೆ ಮಾಡುತ್ತಿದ್ದಾರೆ. ಇದು ಜಗತ್ತಿನ ದೊಡ್ಡ ಕೊಡುಗೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಹೀಗಾಗಿ, ಈ ಬಾರಿಯ ಯೋಗದಿನಾಚರಣೆಯನ್ನು ಕರ್ನಾಟಕದಲ್ಲಿ ಆಚರಿಸುತ್ತಿದ್ದಾರೆ. ಅವರ ಒಂದು ಕರೆಯಿಂದ ಇಂದು ಜಗತ್ತಿನ 100ಕ್ಕೂ ಅಧಿಕ ದೇಶಗಳ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿಯೇ ಕಲಬುರಗಿ ಜಿಲ್ಲೆಯೂ 10 ಸಾವಿರಕ್ಕೂ ಹೆಚ್ಚಿನ ಜನರು ಭಾಗವಹಿಸುವಂತ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಡಾ. ಬಿ. ಜಿ ಪಾಟೀಲ್ ಮಾತನಾಡಿದರು. ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಯೋಗದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದರು. ಆಯುಷ್ ಇಲಾಖೆಯ ಯೋಗ ಶಿಕ್ಷಕರಾದ ನಾಗರಾಜ್, ಸುದೀಪ್ ಹಾಗೂ ಶಶಿಕಲಾ ಅವರು ಯೋಗ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಶಶೀಲ ಜಿ. ನಮೋಶಿ, ಮಹಿಳಾ ಮತ್ತು ಮಕ್ಕಳು ಕಲ್ಯಾಣ ನಿಗಮ ಮಂಡಳಿ ಅಧ್ಯಕ್ಷೆ ಶಶಿಕಲಾ ವಿ ತೆಂಗಳಿ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೀರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಸಹಾಯಕ ಪೊಲೀಸ್ ಆಯುಕ್ತ (ಕಾ ಮತ್ತು ಸು) ಅಡ್ಡೂರು ಶ್ರೀನಿವಾಸಲು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ್ ಪಾಟೀಲ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಯೋಗಪಟುಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!