ಹೊಸದಿಗಂತ ವರದಿ ಯಲ್ಲಾಪುರ :
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪಟ್ಟಣದ ಅಡಿಕೆ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ, ಪತಂಜಲಿ ಯೋಗ ಸಮಿತಿ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಪತಂಜಲಿ ಯೋಗ ಸಮಿತಿಯ ಪದಾಧಿಕಾರಿಗಳು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ಪ್ರಮುಖರು ಯೋಗ ಪಟುಗಳು ಉಪಸ್ಥಿತರಿದ್ದರು.