ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರು ಸ್ಫೋಟಗೊಂಡಿದ್ದು, ಆ ಪ್ರದೇಶದಲ್ಲಿ ಭೀತಿ ಉಂಟಾಗಿದೆ. ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ.
ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಭಯೋತ್ಪಾದಕರ ಅತೀ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ ಬೆನ್ನಲ್ಲೇ ಈ ಸ್ಫೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಫೋಟದ ಕಾರಣ ಸ್ಪಷ್ಟವಾಗಿಲ್ಲ. ಆದರೆ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಓರ್ವ ಮೃತಪಟ್ಟಿರುವ ಶಂಕೆ
ಕಾರಿನಲ್ಲಿ ಸ್ಫೋಟಕವಿಟ್ಟು ಬ್ಲಾಸ್ಟ್ ಮಾಡಿರುವ ಅನುಮಾನಗಳು ವ್ಯಕ್ತವಾಗುತ್ತಿದೆ. ಮೇಲ್ನೋಟಕ್ಕೆ ಭಯೋತ್ಪಾದಕರ ಕೃತ್ಯ ಎಂದು ವರದಿಗಳು ಹೇಳುತ್ತಿದೆ. ದೆಹಲಿ ಕಾರು ಸ್ಫೋಟದಲ್ಲಿ ಓರ್ವ ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ. ಹಲವರು ಗಾಯಗೊಂಡಿರುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

