ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದವರನ್ನು ಗುರುತಿಸಿ ಬಂಧಿಸಲು ಹಾಗೂ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ಹಾನಿಯ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುವುದು. ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದವರ ಬಗ್ಗೆ ವಾರಣಾಸಿಯ ಗ್ರಾಮೀಣ ಭಾಗದ ಸರಕಾರಿ ಸಿಬ್ಬಂದಿ, ರಹಸ್ಯ ವ್ಯಕ್ತಿಗಳು ಹಾಗೂ ಇತರ ಜಿಲ್ಲೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜೂನ್ 17ರ ಪ್ರತಿಭಟನೆಯಲ್ಲಿ 36 ಬಸ್ಗಳಿಗೆ ಹಾನಿಯಾಗಿದ್ದು, 12.97 ಲಕ್ಷ ರೂ. ನಷ್ಟ ಸಂಭವಿಸಿದೆ. ಘಟನೆಯ ಸಂಬಂಧ ಈಗಾಗಲೇ 27 ಜನರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಮತ್ತಷ್ಟು ಜನರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.