ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪು ಕೋಟೆ ಸಮೀಪ ಸಂಜೆ ಕಾರು ಸ್ಫೋಟಗೊಂಡು ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದ್ದು,ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಲಾಗಿದೆ.
ಗೌರಿ ಶಂಕರ್ ಮಂದಿರದ ಸನಿಹವಿರುವ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ ಒಂದರ ಹೊರಗೆ ಹೆಚ್ಚು ಜನದಟ್ಟಣೆ ಇರುವ ಪ್ರದೇಶದಲ್ಲಿ ಈ ಸ್ಫೋಟ ನಡೆದಿದೆ. ಗಾಯದಿಂದ ಕನಿಷ್ಠ 15 ಮಂದಿಯನ್ನು ಲೋಕ ನಾಯಕ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಮೂವರ ಸ್ಥಿತಿ ಗಂಭೀರವಾಗಿದೆ ಮತ್ತು ಒಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಈ ದುರ್ಘಟನೆಯ ಬಗ್ಗೆ ದೆಹಲಿ ಪೊಲೀಸರು ಪ್ರತಿಕ್ರಿಯೆ ನೀಡಿ, ‘ಸದ್ಯ ಈ ಈ ದುರ್ಘೆನೆಯ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಚಾಂದನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ನಮಗೆ ಮಾಹಿತಿ ಲಭಿಸಿತು. ನಾವು ತಕ್ಷಣ ಪ್ರತಿಕ್ರಿಯಿಸಿದೆವು ಮತ್ತು ಏಳು ಘಟಕಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಂಜೆ 7:29 ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಇದರಲ್ಲಿ ಸಾವುನೋವುಗಳಿರುವ ಸಾಧ್ಯತೆಯಿದೆ. ನಮ್ಮ ಎಲ್ಲಾ ತಂಡಗಳು ಸ್ಥಳದಲ್ಲಿವೆ ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಕೆ ಮಲಿಕ್ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಇಪ್ಪತ್ತು ಅಗ್ನಿಶಾಮಕ ದಳಗಳನ್ನು ತಕ್ಷಣವೇ ರವಾನಿಸಲಾಯಿತು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಕ್ಷಿಪ್ರವಾಗಿ ಕೆಲಸ ಮಾಡಿದರು. ಹಲವು ಗಾಯಾಳುಗಳನ್ನು ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ.

