Thursday, November 13, 2025

ದೆಹಲಿಯಲ್ಲಿ ಕಾರು ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪು ಕೋಟೆ ಸಮೀಪ ಸಂಜೆ ಕಾರು ಸ್ಫೋಟಗೊಂಡು ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದ್ದು,ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಸ್ಫೋಟದ ರಭಸಕ್ಕೆ ಸ್ಥಳದಲ್ಲಿದ್ದ ಮೃತರ ದೇಹಗಳ ಭಾಗಗಳು 150-160 ಮೀಟರ್ ದೂರದವರೆಗೆ ಹೋಗಿ ಬಿದ್ದಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಕೆಂಪುಕೋಟೆ ಮೆಟ್ರೋ ಬಳಿಯೇ ಇದ್ದ ಅಂಗಡಿಗಳೊಳಗೆ ಮನುಷ್ಯರ ಕೈ, ಕಾಲುಗಳು ಬಂದು ಬಿದ್ದಿವೆ. ಅಕ್ಕಪಕ್ಕದ ರಸ್ತೆಗಳಲ್ಲಿ ತಲೆ, ಕೈ, ಕಾಲುಗಳು ಹಾಗೂ ದೇಹಗಳ ಇತರ ಭಾಗಗಳು ಬಂದು ಬಿದ್ದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೆಹಲಿ ಪೊಲೀಸರು, ಸಿಆರ್‌ಪಿಎಫ್ ತಂಡ ಘಟನಾ ಸ್ಥಳದಲ್ಲಿ ಇದ್ದು, ಇಂಚಿಂಚೂ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಕೂಡ ಧಾವಿಸಿದ್ದು, ಸ್ಫೋಟಕ್ಕೆ ಕಾರಣ ಪತ್ತೆಹೆಚ್ಚುವ ಕಾರ್ಯದಲ್ಲಿ ತೊಡಗಿದೆ.

error: Content is protected !!