ಹೊಸದಿಗಂತ ವರದಿ ಬಳ್ಳಾರಿ:
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಅವರ ಕೊಡುಗೆಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಮಾತನಾಡಿ, ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರನ್ನು ಎಷ್ಟು ಸ್ಮರಿಸಿದರೂ ಸಾಲದು, ಅವರ ತತ್ವ, ಆದರ್ಶಗಳು ಇಂದಿಗೂ ಆದರ್ಶವಾಗಿವೆ ಎಂದರು.