ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪು ಕೋಟೆ ಬಳಿಯ ಟ್ರಾಫಿಕ್ ಸಿಗ್ನಲ್ ಬಳಿ ಸಂಭವಿಸಿದ ಕಾರು ಸ್ಫೋಟ ಸಂಬಂಧ ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸದ್ಯ ಅಮಿತ್ ಶಾ ಗಾಯಾಳುಗಳನ್ನು ದಾಖಲಿಸಿರುವ ಆಸ್ಪತ್ರೆಗೆ ದೌಡಾಯಿಸಿದ್ದಾರೆ.ಗಾಯಾಳುಗಳ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಎಲ್ಲಾ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚಿಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಇದಾದ ಬಳಿಕ ಅಮಿತ್ ಶಾ ಅವರು ಸ್ಫೋಟ ಸಂಭವಿಸಿದ್ದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ .

