Tuesday, November 11, 2025

WEATHER | ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುತ್ತದೆಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಪ್ರದೇಶದ ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

error: Content is protected !!