ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಗೆಲುವು ಸಾಧಿಸಿದ್ದು, ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.
ನ್ಯೂಜಿಲ್ಯಾಂಡ್ ನೀಡಿದ್ದ 296ರನ್ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ತಂಡದ ಪರ ಅಬ್ಬರಿಸಿದ ಬೈರ್ ಸ್ಟೋ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಗೆಲುವಿಗೆ ಕಾರಣರಾದರು.
ಮೊದಲ ಇನ್ನಿಂಗ್ಸ್ನಲ್ಲಿ ನ್ಯೂಜಿಲ್ಯಾಂಡ್ 329ರನ್ಗಳಿಕೆ ಮಾಡಿ ಆಲೌಟ್ ಆಗಿತ್ತು. ಇಂಗ್ಲೆಂಡ್ ತಂಡ ಸಹ 360ರನ್ಗಳಿಕೆ ಮಾಡಿ ಅಲ್ಪ ಮುನ್ನಡೆ ಪಡೆದುಕೊಂಡಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ 326ರನ್ಗಳಿಗೆ ಕಿವೀಸ್ ಪಡೆ ಆಲೌಟ್ ಆಗುವ ಮೂಲಕ 296ರನ್ಗಳ ಗುರಿ ನೀಡಿತ್ತು.