Tuesday, November 11, 2025

ʼಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ ಪರಿಹಾರ ಕಂಡುಹಿಡೀಬೇಕುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ ವಿಧಾನಗಳ ಮೂಲಕ ಪರಿಣಾಮಕಾರಿ ಪರಿಹಾರವನ್ನು ಕಂಡುಹಿಡಿಯುವ ತುರ್ತು ಅವಶ್ಯಕತೆಯಿದೆ ಎಂದು ಹೇಳಿದರು. ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ. ಇದಕ್ಕಾಗಿ ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು, ಲಾಂಟೆನಾ ತೆಗೆಸಬೇಕು, ಅರಣ್ಯದಲ್ಲಿ ಪ್ರಾಣಿಗಳಿಗೆ ಮೇವು ಬೆಳೆಸಬೇಕು, ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಹೇಳಿದರು.

ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎನ್ನುವ ಮಾಹಿತಿ ಇದೆ ಎಂದು ತಿಳಿಸಿದರು.

error: Content is protected !!