ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಘಟನೆಯ ತನಿಖೆಯ ಹೊಣೆಯನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ)ಗೆ ವಹಿಸಲಾಗಿದೆ.
ಇಂದು (ಮಂಗಳವಾರ) ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸೋಮವಾರ ಸಂಜೆ 12 ಜನರು ಸಾವನ್ನಪ್ಪಿ 25 ಕ್ಕೂ ಹೆಚ್ಚು ಜನರು ಗಾಯಗೊಂಡ ದೆಹಲಿ ಕೆಂಪು ಕೋಟೆ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕೃತವಾಗಿ ವಹಿಸಿಕೊಂಡಿದೆ.
ಅಮಿತ್ ಶಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಗೃಹ ಕಾರ್ಯದರ್ಶಿ, ನಿರ್ದೇಶಕ ಐಬಿ, ದೆಹಲಿ ಪೊಲೀಸ್ ಆಯುಕ್ತರು ಮತ್ತು ಡಿಜಿ NIA ಸಭೆಯಲ್ಲಿ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

