Wednesday, December 3, 2025

ಬಿಹಾರ ಚುನಾವಣೆಗೆ ದೆಹಲಿ ಸ್ಫೋಟ ಎಫೆಕ್ಟ್: ಕೇಂದ್ರ ಸರ್ಕಾರವೇ ತನಿಖೆ ನಡೆಸಲಿ ಎಂದ ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಸ್ಫೋಟ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಕೂಡ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಹಾಗಾಗಿ ಕೇಂದ್ರ ಸರ್ಕಾರವೇ ಈ ಕುರಿತು ತನಿಖೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಸ್ಫೋಟ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್​ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ಬಾಂಬ್ ಬ್ಲಾಸ್ಟ್​ಗಳು ಆಗಬಾರದು. ಇದರಿಂದಾಗುವ ಅಮಾಯಕರ ಜೀವಹಾನಿ ತುಂಬಾ ಬೇಸರದ ಸಂಗತಿ ಎಂದರು.

error: Content is protected !!