March 14, 2026
Saturday, March 14, 2026
spot_img

ದೆಹಲಿ ಕಾರು ಸ್ಫೋಟ: ಜೈಶ್ ಮಹಿಳಾ ವಿಂಗ್‌ನ ನಾಯಕಿ, ವೈದ್ಯೆ ಶಾಹಿನಾ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪುಕೋಟೆಯ ಬಳಿಯ ಸ್ಫೋಟದ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ದಾಳಿ ನಡೆಸಿ ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ.

ಸೋಮವಾರ (ನ.10) ಜಮ್ಮು ಕಾಶ್ಮೀರ ಮತ್ತು ಫರೀದಾಬಾದ್ ಪೊಲೀಸರು ಜಂಟಿ ಕಾರ್ಯಾಚರಣೆ ವೇಳೆ 2,900 ಕೆ.ಜಿ ಸ್ಫೋಟಕಗಳನ್ನು ಪತ್ತೆ ಹಚ್ಚಿ, ಎಂಟು ಜನರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೇ ಇದೀಗ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ವೈದ್ಯೆ ಶಾಹಿನಾ ಕಾರಿನಲ್ಲಿ ರೈಫಲ್, ಮದ್ದುಗುಂಡುಗಳು ಪತ್ತೆಯಾಗಿವೆ.

ಬಂಧಿತ ವೈದ್ಯೆ ಜೈಶ್ ಮಹಿಳಾ ವಿಂಗ್‌ಗೆ ಭಾರತದ ನಾಯಕಿಯಾಗಿದ್ದು, ಜೆಇಎಂ ಸಂಸ್ಥಾಪಕ ಮಸೂದ್ ಅಜರ್‌ನ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಇಎಂನ ಮಹಿಳಾ ವಿಭಾಗವಾದ ಜಮಾತ್ ಉಲ್-ಮೊಮಿನಾತ್‌ನ ಕಮಾಂಡ್ ಜವಾಬ್ದಾರಿಯನ್ನು ಕೂಡ ಆರೋಪಿತೆಗೆ ವಹಿಸಲಾಗಿತ್ತು. ಜೊತೆಗೆ ಸಾದಿಯಾ ಅಜರ್ ಪತಿ ಯೂಸುಫ್ ಅಜರ್ 1996ರ ಕಂದಹಾರ್ ಹೈಜಾಕ್‌ನ ಸೂತ್ರಧಾರಿಯಾಗಿದ್ದ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಶಾಹಿನಾ ಶಾಹಿದ್ ಲಕ್ನೋದ ಲಾಲ್‌ಬಾಗ್ ನಿವಾಸಿಯಾಗಿದ್ದು, ಬಂಧಿತ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್ ಜೊತೆಗೆ ನಿಕಟ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !