June 14, 2026
Sunday, June 14, 2026
spot_img

ದೆಹಲಿ ಕಾರು ಸ್ಫೋಟ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರ, ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ಬಿಐಎಎಲ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣ ದೇಶದಲ್ಲಿ ಆತಂಕ ಮೂಡಿಸಿದೆ.ಎನ್ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಪ್ರಕರಣ ಸಂಬಂಧ ಕೆಲ ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸ್ಪೋಟ ಪ್ರಕರಣದಿಂದ ದೇಶದ ಎಲ್ಲಾ ನಗರ, ಪಟ್ಟಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇತ್ತ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಸೇರಿದಂತೆ ಜನ ನಿಬಿಡ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೈ ಅಲರ್ಟ್ ಘೋಷಣೆ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮಹತ್ವದ ಸೂಚನೆ ನೀಡಿದೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ತಪಾಸಣೆ ಪ್ರಕ್ರಿಯೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ ಆಡಳಿತ ಮಂಡಳಿಯಿಂದ ಪ್ರಯಾಣಿಕರಲ್ಲಿ ಮನವಿ ಮಾಡಲಾಗಿದೆ. ಅವಧಿಗಿಂತ ಮುಂಚಿತವಾಗಿ ಆಗಮಿಸುವಂತೆ ಮನವಿ ಮಾಡಿದೆ. ತೀವ್ರ ತಪಾಸಣೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ವಿಳಂಬವಾಗಲಿದೆ ಎಂದಿದೆ.

ಭದ್ರತಾ ಪರಿಶೀಲನೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೇಗ ಏರ್ಪೋರ್ಟ್‌ಗೆ ಆಗಮಿಸಿ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದರಿಂದ ನಿಮ್ಮ ಪ್ರಯಾಣಕ್ಕೂ ಅನುಕೂಲವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ ಎಂದು ಬೆಂಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !